ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯನ್ನು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೆ.2ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.
ಈ ಸಭೆ ದ.ಕ.ಜಿಲ್ಲಾ -ಆರೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.