Site icon Suddi Belthangady

ಗಣೇಶೋತ್ಸವ: ನಿಯಮ ಉಲ್ಲಂಘನೆ, ಕರ್ತವ್ಯಕ್ಕೆ ಅಡ್ಡಿ- ಪುಂಜಾಲಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಬಂಟ್ವಾಳ ಪಿಲಾತಬೆಟ್ಟು ಗ್ರಾಮದ ಬಂಗ್ಲೆ ಮೈದಾನದ ಬಳಿ, ಪುಂಜಾಲಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆ.27ರಂದು ರಾತ್ರಿ ಸುಮಾರು 10.45 ಗಂಟೆಯ ವೇಳೆಗೆ ಧ್ವನಿವರ್ಧಕವನ್ನು ಅಳವಡಿಸಿ ಕಾರ್ಯಕ್ರಮ ನಡೆಸಿರುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಎಸ್.ಐರವರು ಕಾರ್ಯಕ್ರಮದ ಆಯೋಜಕರಲ್ಲಿ ಧ್ವನಿ ವರ್ಧಕಗಳ ಬಳಕೆಯ ಬಗ್ಗೆ ಜಾರಿಯಲ್ಲಿರುವ ಕಾನೂನಿನ ಬಗ್ಗೆ ಹಾಗೂ ಸದ್ರಿ ಕಾನೂನುಗಳನ್ನು ಪಾಲಿಸುವಂತೆ ” ಠಾಣೆಯಿಂದ ನೋಟೀಸ್‌ ಬಗ್ಗೆ ತಿಳುವಳಿಕೆ ನೀಡಿ, ಧ್ವನಿವರ್ಧಕ ಸ್ಥಗಿತಗೊಳಿಸುವಂತೆ ವಿನಂತಿಸಿಕೊಂಡಿದ್ದರು. ಇದಕ್ಕೆ ಒಪ್ಪಿದ ಆಯೋಜಕರು ಧ್ವನಿವರ್ಧಕ ಬಳಕೆ ನಿಲ್ಲಿಸಿದ್ದಾರೆ.

ಆದರೆ ರಾತ್ರಿ ಸುಮಾರು 11.50ರ ವೇಳೆಗೆ ಅದೇ ಸ್ಥಳಕ್ಕೆ ವಾಪಸ್‌ ಬಂದಾಗ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ಧ್ವನಿವರ್ಧಕವನ್ನು ಬಳಸಿ ಕಾರ್ಯಕ್ರಮ ನಡೆಸುತ್ತಿದ್ದರು. ಈ ಬಗ್ಗೆ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳನ್ನು ಪ್ರಶ್ನಿಸಿದಾಗ ಸ್ಥಳದಲ್ಲಿದ್ದ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೌಶಿಕ್ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಪುನೀತ್ ಮಡಂತ್ಯಾರು, ತಾರನಾಥ ಕಜೆಕ್ಕಾರು, ಗುರು ಮಡಂತ್ಯಾರು, ನಾಟಕ ಆಯೋಜಕರು ಮತ್ತು ಸುಮಾರು 10-15 ಜನರ
ಗುಂಪು ಸೇರಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಅಲ್ಲದೆ, ಪೊಲೀಸ್‌ಗೆ ಧಿಕ್ಕಾರವನ್ನೂ ಕೂಗಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಸದ್ರಿ ಆರೋಪಿಗಳು ಕಾರ್ಯಕ್ರಮದ ಅಯೋಜಕರಿಗೆ ನೀಡಲಾಗಿದ್ದ ತಿಳುವಳಿಕೆ ಪತ್ರದ ಷರತ್ತನ್ನು ಉಲ್ಲಂಘಿಸಿ ಧ್ವನಿವರ್ದಕವನ್ನು ಬಳಸಿ, ಅಕ್ರಮ ಕೂಟ ಸೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 52/2025, 500: 189(2), 191(2),191(3), 132, 190 :NS-2023, 5 : 31,37,92(i) KP Act, ಮತ್ತು ಕಲಂ: 5,6 ಧ್ವನಿ ಮಾಲಿನ್ಯ ನಿಯಂತ್ರಣ ನಿಯಮಗಳು-2000ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Exit mobile version