
ಬೆಳ್ತಂಗಡಿ: ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಆ.28ರಂದು ಮುಂಜಾನೆ ನಡೆದಿದೆ.
ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60ವ.) ಮೃತಪಟ್ಟವರಾಗಿದ್ದಾರೆ. ಇವರು ಕೆಎ 52, ಬಿ 9011 ನೋಂದಣಿ ನಂಬರಿನ ಲಾರಿಯಲ್ಲಿ ಚಾಲಕರಾಗಿದ್ದು ಆ.27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದಿದ್ದು, ಆ.28ರಂದು ಮುಂಜಾನೆ 1 ಗಂಟೆ ಸುಮಾರಿಗೆ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ಲಾರಿ ನಿಲ್ಲಿಸಿ ಲಾರಿಯಿಂದ ಇಳಿದು ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ರಾಜಶೇಖರ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.