ಧರ್ಮಸ್ಥಳ: ಸಾಮೂಹಿಕ ವಿವಾಹಗಳ ಬಗ್ಗೆ ಅವಹೇಳನಕಾರಿ ಹೇಳಿಕೆ-ಹೆಣ್ಣುಮಕ್ಕಳ ಘನತೆಗೆ ಧಕ್ಕೆ ಆರೋಪ-ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ಮದುವೆಗಳ ಬಗ್ಗೆ ಅವಹೇಳನ ಹೇಳಿಕೆಯನ್ನು ವಿರೋಧಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಮಹಿಳೆಯರ ಜೊತೆ ಆಗಮಿಸಿ ಬೆಂಗಳೂರಿನಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಾಮೂಹಿಕ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಹಿತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ವೇಳೆ ಮಾತನಾಡಿದ ಕಾವೇರಿ ” ಹೆಣ್ಣುಮಕ್ಕಳ ಘನತೆಗೆ ಧಕ್ಕೆಯಾಗುವಂತೆ ಮಾತನಾಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತರ ಮೇಲೆ ತುಂಬಾ ಹೀನವಾಗಿ ಮಾತಾಡಿದ್ದಾರೆ. ಕೇವಲ ಬಡವರು ಅಂತ ಮಾತ್ರವಲ್ಲ, ಹರಕೆ ಹೊತ್ತು ಧರ್ಮಸ್ಥಳದಲ್ಲಿ ಮದುವೆ ಆಗ್ತಾರೆ. ಸಾವಿರಾರು ಕುಟುಂಬಗಳು ಅಲ್ಲಿ ಮದುವೆಯಾಗಿ ಉತ್ತಮ ಜೀವನ ನಡೆಸುತ್ತಿದ್ದಾರೆ. ಅಂತಹ ಹೆಣ್ಣು‌ಮಕ್ಕಳನ್ನ ಅವಮಾನಿಸುವ ಕೆಲಸ‌ ಮಾಡಿದ್ದಾರೆ. ಶ್ರೀ ಕ್ಷೇತ್ರದ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದು‌ ಮಾತ್ರವಲ್ಲ
ಸಾಮೂಹಿಕ ಮದುವೆಯಾದ ಎಲ್ಲರನ್ನೂ ಅವಹೇಳನ ಮಾಡಿದ್ದಾರೆ ” ಎಂದ ಅವರು, ಈ‌ ಬಗ್ಗೆ ಕೂಡಲೇ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here