
ಬೆಳಾಲು: ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ಆ. 29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ದ ಕಾರ್ಯಪಾಲ ಅಭಿಯಂತರರ ಜನಾರ್ದನ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷೆ ಗೀತಾ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಎಸ್. ಸ್ವಾಗತಿಸಿ, ವರದಿ ವಾಚಿಸಿದರು. ಸಿಬ್ಬಂದಿಗಳು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.
ಸಭೆಯಲ್ಲಿ ಮೆಸ್ಕಾಂ ಇಲಾಖೆಯ ಪವರ್ ಮ್ಯಾನ್ ರಮೇಶ್ ಗೌಡ, ಮಹಂತೇಶ್, ಆನಂದ ಅವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.