
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರನಾಗಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ 48ಗಂಟೆಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತಿದ್ದಾರೆ. ಆ. 29ರಂದು ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಸ್.ಐ.ಟಿ ಅಧಿಕಾರಿಗಳು ಆರೋಪಿಯನ್ನು ಆಸ್ಪತ್ರೆಗೆ ಕರೆತಂದು ಆರೋಗ್ಯ ಪರೀಕ್ಷೆ ನಂತರ ಮತ್ತೆ ಎಸ್.ಐ.ಟಿ ಕಚೇರಿಗೆವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.