
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕ ಪ್ರೊ. ಮಾರುತಿ ಜಿ. ಅವರು ಧ್ಯಾನ್ ಚಂದ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾಲೇಜಿನ ಹಿರಿಯ ಉಪನ್ಯಾಸಕ ಪ್ರೊ.ಪದ್ಮನಾಭ ಕೆ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.