Site icon Suddi Belthangady

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಿಂದ ಸಮಸ್ತ ಜೈನ ಧರ್ಮೀಯ ಶ್ರಾವಕ ಶ್ರಾವಿಕೆಯರು ವಾಹನದ ಮೂಲಕ ಜಾಥಾವನ್ನು ಆ.31ರಂದು ಹಮ್ಮಿಕೊಂಡಿರುತ್ತಾರೆ. ಈ ಜಾಥಾದಲ್ಲಿ ತಾಲೂಕಿನ ಮೂಲೆ ಮೂಲೆಗಳಿಂದ ಎಲ್ಲ ಶ್ರಾವಕರು ಪಾಲ್ಗೊಳ್ಳಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ಹಾಗೂ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವ ರೊಂದಿಗೆ ನಾವಿದ್ದೇವೆ. ಹಾಗೂ ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂದು ಸಂದೇಶ ಸಾರುವ ಮೂಲ ಉದ್ದೇಶದೊಂದಿಗೆ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಸದ್ರಿ ಜಾಥಾವು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಿಂದ ಬೆಳಗ್ಗೆ 8:30 ಕ್ಕೆ 3 ಬಸದಿಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ವಾಹನ ಜಾಥಾ ಆರಂಭಗೊಳ್ಳಲಿದೆ.

ವಿಶ್ವದ ಎಲ್ಲಾ ಕಡೆ ಶಾಂತಿ ನೆಲೆಸಿ ಪ್ರತಿಯೊಬ್ಬರ ಬದುಕು ಸುಂದರವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ ಜಾಥಾ ಮುನ್ನಡೆಯಲಿದೆ.

ವಿಶೇಷವಾಗಿ ಈ ಜಾಥಾದಲ್ಲಿ ಸಂಘಟಕರು ಯಾರೆಂದರೆ ಪ್ರತಿಯೊಬ್ಬ ಶ್ರಾವಕ ಮತ್ತು ಶ್ರಾವಕಿಯರು ಈ ರೀತಿಯ ಹೊಸ ಯೋಚನೆ ಮತ್ತು ಯೋಜನೆಯೊಂದಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರಾವಕ – ಶ್ರಾವಿಕೆಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Exit mobile version