
ತೆಕ್ಕಾರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಝಾಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.