
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2025ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕ ಶೇಕಡಾ 100 ಫಲಿತಾಂಶ ಪಡೆದುಕೊಂಡಿರುತ್ತದೆ.
ಇಲ್ಲಿನ 19 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಸಂಸ್ಥೆಯ ನಿರ್ದೇಶಕಿ, ನೃತ್ಯಗುರು ವಿದುಷಿ ವಿದ್ಯಾ ಮನೋಜ್ ರವರ ಶಿಷ್ಯಯರಾಗಿದ್ದು, ವಿದ್ಯಾರ್ಥಿಗಳು ಉನ್ನತ ಶ್ರೇಣಿಯನ್ನು ಪಡೆದು ಸಾಧನೆಗೈಯಲು ಗುರುವಿನ ಉತ್ತಮ ತರಬೇತಿ ಹಾಗೂ ಮಾರ್ಗದರ್ಶನ ಕಾರಣವಾಗಿದೆ.