


ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಾಧನೆಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಸತತ ಒಂಬತ್ತನೇ ಬಾರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಸ್ವೀಕರಿಸಿದರು.


ನಿರ್ದೇಶಕ ಆನಂದ ಪೂಜಾರಿ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ, ಮಾಜಿ ನಿರ್ದೇಶಕ ಸತೀಶ್ ಕಾಶಿಪಟ್ಣ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕ ಬಾಸ್ಕರ ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು, ಟಿ.ಜಿ.ರಾಜರಾಮ ಭಟ್, ಅಶೋಕ್ ಕುಮಾರ್ ಶೆಟ್ಟಿ, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.










