
ಬೆಳ್ತಂಗಡಿ: 2024-25 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೆ ಬೆಳ್ತಂಗಡಿ ಕೃಷಿ ಉತ್ಪನ್ನ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ ದೊರಕಿದೆ. ಆ. 30ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಆದರ್ಶ್ ಜೈನ್ ರವರಿಗೆ ನೀಡಿ ಗೌರವಿಸಿದರು.