Site icon Suddi Belthangady

ಅಳದಂಗಡಿ: ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ ದೊರಕಿದೆ. ಆ. 30ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ರವರಿಗೆ ನೀಡಿ ಗೌರವಿಸಿದರು.

Exit mobile version