
ಪದ್ಮುಂಜ: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ
ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ. 30ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಏನ್. ರಾಜೇಂದ್ರ ಕುಮಾರ್, ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ಕೆ. ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.