Site icon Suddi Belthangady

ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

ಬಂಗಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2024-25 ನೇ ಸಾಲಿನಲ್ಲಿ ಸಾಧನೆ ಮಾಡಿದ್ದು ಪ್ರಶಸ್ತಿ ನೀಡಿ ಗೌರವಿಸಲಾಯಿತು

ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್ ಅವರು ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್‌ ಸಾಲ್ಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾ‌ರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ನಿರ್ದೇಶಕರಾದ ವಿನಯಚಂದ್ರ, ಶೀನಪ್ಪ, ಪುಷ್ಪಲತಾ ಕೆ., ವೇದಾವತಿ, ಬಾಲಕೃಷ್ಣ ಸುವರ್ಣ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Exit mobile version