
ಕೊಯ್ಯೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿ ಗುರುತಿಸಿ ಉತ್ತಮ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಕೊಯ್ಯೂರು ಸಿಎ ಬ್ಯಾಂಕ್ ಅಧ್ಯಕ್ಷ ರವೀಂದ್ರನಾಥ್ ಪಿ. ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯ ಅಧಿಕಾರಿಗಳು, ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.