
ಧರ್ಮಸ್ಥಳ: ಈಗಾಗಲೇ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಈ ಕೇಸ್‌ಗೆ ಸಂಬಂಧಪಟ್ಟಂತೆ ರಾಜಕೀಯದಲ್ಲಿಯೂ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ಧರ್ಮಸ್ಥಳಕ್ಕೆ ಆ.31ರಂದು ಜೆಡಿಎಸ್ ಪಾದಯಾತ್ರೆ ಕೈಗೊಂಡು ದೇವರ ದರ್ಶನವನ್ನು ಪಡೆದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಮಾಧ್ಯಮದವರು ಆಫ್ ದಿ ರೆಕಾರ್ಡ್ ಕಾಂಗ್ರೆಸ್ ನ ಯಾವುದೇ ಶಾಸಕರಿಗೂ ಕೇಳಿದರು. ಎಸ್ಐಟಿ ರಚನೆ ಮಾಡಿರುವುದು ತಪ್ಪಾಗಿದೆ ಎಂದು ಹೇಳುತ್ತಾರೆ. ಮತ್ತು ಅವರೊಳಗೆ ಚರ್ಚೆಗಳು ಪ್ರಾರಂಭವಾಗಿದೆ.
ಅನಾಮಿಕ ವ್ಯಕ್ತಿ ಬುರುಡೆ ತಂದ ತಕ್ಷಣ ಪ್ರಾಥಮಿಕವಾಗಿ ಅವನ ಹಿನ್ನಲೆ ಮತ್ತು ಉದ್ದೇಶದ ಬಗ್ಗೆ ತನಿಖೆ ನಡೆಯಬೇಕಿತ್ತು , ಇದರ ಹಿಂದೆ ಯಾರೆಲ್ಲಾ ವ್ಯಕ್ತಿಗಳು ಇದ್ದಾರೆ ಮತ್ತು ಯಾವ ದೇಶದಿಂದ ಹಣ ಬರುತ್ತಿದೆ ಎಂದು NIA ತನಿಖೆ ನಡೆಯಬೇಕು ಎಂದರು.
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರ ಬರಬೇಕು. ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ ಎಂದರು.
ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಿ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾಕ್ಕೆ ತೆರಳಿದರು. ಈ ಯಾತ್ರೆಯಲ್ಲಿ ಜೆಡಿಎಸ್ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.