Site icon Suddi Belthangady

ಧರ್ಮಸ್ಥಳ: ಚಲೋ ಕಾರ್ಯಕ್ರಮದ ಹಿನ್ನೆಲೆ-ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ-ಸಂಘನಿಕೇತನದ ಗಣೇಶೋತ್ಸವದಲ್ಲಿ ಭಾಗಿ

ಮಂಗಳೂರು: ಆ.1ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಬಿಜೆಪಿಯ ಬೃಹತ್ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.

ಈ ವೇಳೆ ಅವರು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿ, ವಿಘ್ನ ನಿವಾರಕನ ಆಶೀರ್ವಾದ ಪಡೆದರು.

ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Exit mobile version