ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ, ಕುಟುಂಬ ಮಿಲನ ಸಮಾರೋಪ

0

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳ ಪದ ಪ್ರಧಾನ ಮತ್ತು ಉಜಿರೆ ವರ್ತಕರ ಕುಟುಂಬ ಮಿಲನ ಸಮಾರೋಪ ಸಮಾರಂಭ ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ವಹಿಸಿಕೊಂಡಿದ್ದರು. ಮುಂದಿನ ಸಾಲಿನ ನೂತನ ಅಧ್ಯಕ್ಷ ಪ್ರಸಾದ್ ಬಿ. ಎಸ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ ಮತ್ತು ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ಮುಖ್ಯ ಭಾಷಣಗಾರರಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆ ಮೇಲು, ಬೆಳ್ತಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ ಶುಭ ಕೋರಿದರು. ಸಂಘದ ಗೌರವಾಧ್ಯಕ್ಷ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ
ಪಡುವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಮಡಂತ್ಯಾರು ವಾಣಿಜ್ಯ ಮತ್ತು ಕೈಗಾರಿಕಾ ಸೇವಾ ಉದ್ದಿಮೆದಾರರ ಸಂಘದ ಉಪಾಧ್ಯಕ್ಷ ಯೋಗೀಶ್ ಕಡ್ತಿಲ,
ಉಜಿರೆ ಬೆಡ್ ಮಾರ್ಟ್ ಯು.ಎ. ಹಮೀದ್, ಮಂಜುಶ್ರೀ ಫ್ಯಾನ್ಸಿ ಕೇವಲ್ ರಾಮ್, ಉಜಿರೆ ವಿಘ್ನಶ್ ಬ್ಯಾಟರಿ ಮಾಲಕ ತುಂಗಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

ಮನೆ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿರುವ ಎಸ್ ಎ ಮೆಡಿಕಲ್ ಪ್ರಕಾಶ್ ಫೆರ್ನಾಂಡಿಸ್, ನಿಕಟ ಪೂರ್ವ ಅಧ್ಯಕ್ಷ ಅರವಿಂದ ಕಾರಂತ್, ನಿಕಟ ಪೂರ್ವ ಕಾರ್ಯದರ್ಶಿ ಲಕ್ಷ್ಮಣ ಗೌಡ ಅವರನ್ನು ಸನ್ಮಾನಿಸಲಾಯಿತು.
ನೂತನ ಕಾರ್ಯದರ್ಶಿ ಅಬೂಬಕ್ಕರ್ ಸ್ವಾಗತಿಸಿದರು ಚಂದ್ರಹಾಸ ಬಳಂಜ ನಿರೂಪಿಸಿದರು. ಬೆಳಿಗ್ಗೆಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಮಧ್ಯಾಹ್ನ ತುಳುನಾಡ ಸಾಂಪ್ರದಾಯಕ ಶೈಲಿಯ ಸಹ ಭೋಜನ ಇತ್ತು. ಉಜಿರೆಯ ವರ್ತಕರು, ಅವರ ಕುಟುಂಬ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here