ಧರ್ಮಸ್ಥಳ: ಶ್ರೀ ಕ್ಷೇತ್ರದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆ.1ರಂದು ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಸಮಾವೇಶಕ್ಕೆ ಆಗಮಿಸಿರುವ ಪಕ್ಷದ ನಾಯಕರ ದಂಡು ಶ್ರೀ ಕ್ಷೇತ್ರಕ್ಕೆ ಭೇಟಿಯಾಗಿ ಪ್ರಾರ್ಥನೆ ಮುಗಿಸಿ, ಹೆಗ್ಗಡೆಯವರನ್ನು ಭೇಟಿಯಾದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ತ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಮುಂತಾದವರು ಭೇಟಿ ನೀಡಿದರು.