ಧರ್ಮಸ್ಥಳ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ “ಧರ್ಮಸ್ಥಳ ಚಲೋ ನಮ್ಮ ನಡಿಗೆ ಧರ್ಮದೆಡೆಗೆ” ಬೃಹತ್ ಸಮಾವೇಶವು ಸೆ.1ರಂದು ಧರ್ಮಸ್ಥಳದ ಮೈದಾನದಲ್ಲಿ ನಡೆಯಿತು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಪಕ್ಷದ ಮುಖಂಡರಾದ ಪ್ರಹ್ಲಾದ್ ಜೋಷಿ, ಅಶ್ವಥ್ ನಾರಾಯಣ್, ನಳಿನ್ ಕುಮಾರ್ ಕಟೀಲ್, ಡಿ.ವಿ. ಸದಾನಂದ ಗೌಡ, ಆರ್. ಅಶೋಕ್, ಸ್ವಾಮಿ, ಸಿ.ಟಿ. ರವಿ, ರಾಮುಲು, ವಿಶ್ವನಾಥ್, ವಿಶ್ವನಾಥ್ ಹೆಗ್ಡೆ ಕಾಗೇರಿ, ತೇಜಸ್ವಿ ಸೂರ್ಯ, ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿ. ಸುನಿಲ್ ಕುಮಾರ್, ಮುನಿರಾಜ, ದೊಡ್ಡಣ್ಣೇಗೌಡ, ಮುನಿರತ್ನ, ದಿನಕರ್ ಶೆಟ್ಟಿ, ರವಿಕುಮಾರ್, ಸತೀಶ್ ಕುಂಪಲ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಎಂಎಲ್ಸಿ ಗಳು, ಸೋತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಯಲಹಂಕದ ಶಾಸಕ ಎಸ್.ಆರ್. ವಿಶ್ವನಾಥ್ ಪ್ರಸ್ತಾವಿಕವಾಗಿ ಮಾತನಾಡಿ 800 ವರ್ಷಗಳಿಂದ ಲಕ್ಷಾಂತರ ಭಕ್ತರ ಆಶೋತ್ತರ, ಇಷ್ಟಾರ್ಥಗಳನ್ನು ಈಡೇರಿಸಿದ ಧಾರ್ಮಿಕ ಕ್ಷೇತ್ರದ ಧರ್ಮಸ್ಥಳದ ವಿರುದ್ದದ ಷಡ್ಯಂತ್ರವನ್ನು ತೀವ್ರವಾಗಿ ಖಂಡಿಸುತ್ತೇವೆ. ಹಿಂದೂಗಳ ಒಗ್ಗಟ್ಟಾಗಿ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ತನಿಖೆಯ ಕುರಿತು ಹಾಗೂ ಷಡ್ಯಂತ್ರವನ್ನು ಬೆಂಬಲಿಸಿ ನಡೆದಿರುವ ವಿದೇಶಿ ಫಂಡಿಂಗ್ ಕುರಿತು NIA ಅಥವಾ ಸಿಬಿಐ ಗೆ ನೀಡಲಿ. ಸೌಜನ್ಯ ಪ್ರಕರಣದ ತನಿಖೆಗೆ ಸಂಪೂರ್ಣ ಬೆಂಬಲವಿದೆ ಎಂದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಬಿಜೆಪಿ ಹರೀಶ್ ಪೂಂಜಾ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ನಿರೂಪಿಸಿದರು.