ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಸಹಕಾರದೊಂದಿಗೆ ಯುವ ಚೈತನ್ಯ 2025 ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಕಾರ್ಯಕ್ರಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.
ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಕಾರ್ಯಾಗಾರ ಉದ್ಘಾಟಿಸಿದರು. KAS ತರಬೇತುದಾರ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ| ನಂದೀಶ್ ವೈ. ಡಿ.ವ್ಯಕ್ತಿತ್ವ ವಿಕಸನ ತರೇಬೇತಿ ನೀಡಿದರು.ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್. ಕೆ. ಪ್ರಸಾದ್, ಯುವವಾಹಿನಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಸಂಘದ ನಿರ್ದೇಶಕರಾದ ವಿನೋದಿನಿ ರಾಮಪ್ಪ, ನಮಿತ ಪೂಜಾರಿ, ಸಂತೋಷ್ ಕೆ. ಸಿ., ಚಂದ್ರಶೇಖರ ಇಂದಬೆಟ್ಟು, ಕಮಲಾಕ್ಷ ಪೂಜಾರಿ, ಜಯಕುಮಾರ್ ನಡ, ಉಪಸ್ಥಿತರಿದ್ದರು.
ತಾಲೂಕಿನ ಕಾಲೇಜು ವಿದ್ಯಾರ್ಥಿಗಳು ಪೋಷಕರು ಮತ್ತು ಯುವಬಿಲ್ಲವ ವೇದಿಕೆಯ ಜೊತೆ ಕಾರ್ಯದರ್ಶಿ ಸುರೇಂದ್ರ ಕೋಟ್ಯಾನ್ ಸುರೇಶ್ ಮೆಲಂತಬೆಟ್ಟು ಯೋಗೀಶ್ ಗೇರುಕಟ್ಟೆ ಉಪಸ್ಥಿತರಿದ್ದರು. ಎಮ್. ಕೆ. ಪ್ರಸಾದ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಸಮೀಕ್ಷ ಶಿರ್ಲಾಲು ಮತ್ತು ಯುವ ಬಿಲ್ಲವ ವೇದಿಕೆಯ ಸಾಂಸ್ಕೃತಿಕ ಕಾರ್ಯದರ್ಶಿ ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ನಿತೀಶ್ ಕೋಟ್ಯಾನ್ ಧನ್ಯವಾದವಿತ್ತರು.