ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಆ.30ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲ ಜೋಸೆಫ್ ಎನ್. ಎಂ. ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ಯುವ ಮನಸುಗಳನ್ನು ಬೆಸೆಯುವ ಸೇತುವೆಯಾಗಿದೆ. ಜೊತೆಗೆ ವಿದ್ಯಾರ್ಥಿಗಳಲ್ಲಿ ನಿಸ್ವಾರ್ಥ ಸೇವೆಯ ಪರಿಕಲ್ಪನೆಯನ್ನು ಉತ್ತೇಜಿಸುತ್ತದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಅಲೆಕ್ಸ್ ಐವನ್ ಸಿಕ್ವೇರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ದಿವ್ಯ ವಿ. ಸಹಯೋಜನಾಧಿಕಾರಿ ಜೀವ ವಿ.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯೋಜನಾಧಿಕಾರಿಗಳಾದ ಪ್ರಶಾಂತ ಎಂ. ಸ್ವಾಗತಿಸಿ, ಈ ಕಾರ್ಯಕ್ರಮವನ್ನು ಸ್ವಯಂಸೇವಕಿ ರೂಪಶ್ರೀ ಅವರು ನಿರೂಪಿಸಿದರು. ಸ್ವಯಂಸೇವಕ ಶ್ರೇಯಸ್ ಅವರು ವಂದಿಸಿದರು.