Site icon Suddi Belthangady

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ. ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆಯಲ್ಲಿ ಸೆ.1ರಂದು ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ.

ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿವೆ.

ವೈಯಕ್ತಿಕವಾಗಿ ಕಾರ್ತಿಕ್ – ಬೆಸ್ಟ್ ಅಲ್‌ರೌಂಡರ್, ಅನ್ವಿತಾ ರೆಬೆಲ್ಲೊ – ಬೆಸ್ಟ್ ಸರ್ವರ್, ಇರ್ಷಾದ್ – ಬೆಸ್ಟ್ ಡಿಫೆಂಡರ್ ಪ್ರಶಸ್ತಿ ಲಭಿಸಿದೆ.

ದೈಹಿಕ ಶಿಕ್ಷಣ ಶಿಕ್ಷಕ ಸಿರಾಜ್ ಅವರ ಪರಿಶ್ರಮ ಮಹತ್ವದ್ದಾಗಿದೆ. ಪಿಯು ಕಾಲೇಜು ಪ್ರಾಂಶುಪಾಲೆ ಭಗಿಣಿ ಮೋಲಿ ಡಿಕುನ್ನ, ಸಂಚಾಲಕಿ ಭಗಿಣಿ ತೆರೆಸಿಯ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

Exit mobile version