Site icon Suddi Belthangady

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಆಲ್ ಸ್ಟನ್ (10ನೇ) ಅವರು ರಾಜ್ಯಮಟ್ಟದ ಅಥ್ಲೆಟಿಕ್ಸ್ ನ ರಿಲೇ ಸ್ಪರ್ಧೆಗೆ ಆಯ್ಕೆಗೊಂಡು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರು ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಗೊಂಡರು. ವಿದ್ಯಾರ್ಥಿಯನ್ನು ಶಾಲಾ ಸಂಚಾಲಕ ಗುರುಗಳು ವೋಲ್ಟರ್ ಡಿಮೆಲ್ಲೋ ಹಾಗೂ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋ ಅವರು ಅಭಿನಂದಿಸಿದರು.

Exit mobile version