ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಮಡಂತ್ಯಾರ್ ಗ್ರಾಮ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಬೆಳ್ತಂಗಡಿ, ತಾಲೂಕು ಯುವಜನ ಒಕ್ಕೂಟ, ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ, ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಆಲ್ ಸ್ಟನ್ (10ನೇ) ಇವರು 800 ಮೀ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿದ್ಯಾರ್ಥಿಯನ್ನು ಶಾಲಾ ಸಂಚಾಲಕ ಗುರುಗಳು ವೋಲ್ಟರ್ ಡಿಮೆಲ್ಲೋ ಹಾಗೂ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋ ಅವರು ಅಭಿನಂದಿಸಿದರು.