ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ ಸೆ.3ರಂದು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಗ್ರಂಥಿಶಾಸ್ತ್ರ (Oncology) ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಕೃಷ್ಣ ಶರಣ್ ಅವರು ವಿಷಯದ ಸಲುವಾಗಿ ಭೂಮಿಯನ್ನು ನಾಳಿನ ಜನಾಂಗಕ್ಕಾಗಿ ಸಂರಕ್ಷಿಸುವ ಕುರಿತು ವಿಸ್ತೃತ ಮಾಹಿತಿ ಹಂಚಿಕೊಂಡರು.
ಕಾರ್ಯಗಾರದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿದರು.