ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ತೆರಳುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ. 3ರಂದು ಸಂಚೆ ಉಜಿರೆಯ ಹಳ್ಳಿಮನೆ ಸಮೀಪ ನಡೆದಿದೆ.
ಘಟನೆಯಲ್ಲಿ ಬೈಕ್ ಸಂಪೂರ್ಣ ಹಾನಿಯಾಗಿದ್ದು, ಸವಾರ ಕಡಿರುದ್ಯಾವರ ನಿವಾಸಿ ಪುರುಷೋತ್ತಮ(44ವ) ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.