ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ.4ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ರತ್ನವತಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.
ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬಸಪ್ಪ ಗೌಡ ಸ್ವಾಗತಿಸಿದರು.