ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯ ಕೆ., ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ರವರು ಹಾಗೂ ಪ್ರೌಢ ಶಾಲಾ ವಿಭಾಗದಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಜಯ ಕುಮಾರ್ ಎಂ. ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ: ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
