ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸೆ.5ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.
ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ ಆಯೋಜಿಸಲಾಗಿತ್ತು.
ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.