Site icon Suddi Belthangady

ನಾಳ: ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರವರೆಗೆ ನಡಯಲಿರುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ. 5ರಂದು ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಹರೀಶ್ ಕುಮಾರ್, ಪ್ರಧಾನ ಅರ್ಚಕ ರಾಘವೇಂದ್ರ ಅಸ್ರನ್ನ, ವ್ಯವಸ್ಥಾಪನಾ ಸಮಿತಿ ಸದಸ್ಯರು ಗಳಾದ ರಾಘವ ಹೆಚ್., ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಮೀನಾ ಕುಮಾರರ್, ಭಜನಾ ಮಂಡಳಿ ಅಧ್ಯಕ್ಷ ಗಣೇಶ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯೆ ಅಂಭಾ ಬಿ. ಆಳ್ವ,ಅಭಿವೃದ್ಧಿ ಸಮಿತಿಯ ಮಾಜಿ ಕಾರ್ಯದರ್ಶಿ ಅಶೋಕ್ ಆಚಾರ್ಯ, ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಶೆಟ್ಟಿ, ಕಾರ್ಯದರ್ಶಿ ವಿನೋದ, ಪ್ರಮುಖರಾದ ರಂಜನ್ ಗೌಡ, ಭವಾನಿ ಶಂಕರ್, ಸತೀಶ್ ಭಂಡಾರಿ, ದೇವಸ್ಥಾನದ ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ಅರ್ಚಕರು,
ವಿವಿಧ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

ನವರಾತ್ರಿ ಮತ್ತು ವಿಜಯದಶಮಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು. ಈ ವರ್ಷ ಲಲಿತ ಪಂಚಮಿ ದಿನ ಸೆ. 26ರಂದು ಚಂಡಿಕಾಯಾಗ ನಡೆಯಲಿದೆ.

Exit mobile version