Site icon Suddi Belthangady

ಧರ್ಮಸ್ಥಳದಲ್ಲಿ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಚಾರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ, ಅವರ ಕುಟುಂಬ ವರ್ಗದವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಶಕ್ತಿಗಳ ಷಡ್ಯಂತ್ರವನ್ನು ಮಟ್ಟ ಹಾಕಿ ಅದಕ್ಕೆ ಕಾರಣೀಕರ್ತರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜನನಗಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ, ಕಾಸರಗೋಡು ಉಡುಪಿ ಜಿಲ್ಲೆಗಳ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶ ಸೆ.5ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಿದರು. ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದು
ದೇವಸ್ಥಾನದಿಂದ ಅಮೃತವರ್ಷಿಣಿ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದೇವಸ್ಥಾನ, ದೈವಸ್ಥಾನದ, ಬಸದಿ ಆಡಳಿತ ಮಂಡಳಿ, ಅನುವಂಶಿಕ ಮೊಕ್ತೇಸರರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ -ವಿಧ್ಯಾರ್ಥಿನಿಯರಿಂದ ಪ್ರಾರ್ಥನೆ ಮಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ‌.ಎಂ.ಮೋಹನ್ ಆಳ್ವ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಮ್ ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Exit mobile version