ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸೆ.5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.
ಸಂಘವು ವರದಿ ಸಾಲಿನಲ್ಲಿ ರೂ.1100 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.3.00ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.
ಬೆಳ್ತಂಗಡಿಯಲ್ಲಿ ಸೊಸೈಟಿಗೆ 11 1/2 ಸೆಂಟ್ಸ್ ಜಾಗ ಖರೀದಿ ಮಾಡಲಾಗಿದೆ. 2030 ಕ್ಕೆ ಸೊಸೈಟಿಗೆ ಬೆಳ್ಳಿ ಹಬ್ಬ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಈ ವರ್ಷದಲ್ಲಿ ಧರ್ಮಸ್ಥಳದಲ್ಲಿ ಒಂದು ಶಾಖೆ ಹಾಗೂ ಮಂಗಳೂರಿನಲ್ಲಿ ಮೂರು ಶಾಖೆ ಒಟ್ಟು 4 ಶಾಖೆ ಪ್ರಾರಂಭಗೊಳ್ಳಲಿದೆ ಎಂದರು.
ಮುಖ್ಯ ಕಾರ್ಯನಿರ್ವಣಧಿಕಾರಿ ಸುಜಯ್ ಶೆಟ್ಟಿ ವರದಿ ಮಂಡಿಸಿದರು. ವೇದಿಕೆಯಲ್ಲಿ ನಿರ್ದೇಶಕರಾದ ಎಂ. ಜಿ. ಶೆಟ್ಟಿ, ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ, ಜಯರಾಮ ಬಂಡಾರಿ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಸಾರಿಕಾ ಶೆಟ್ಟಿ, ವಿಜಯ ಬಿ. ಶೆಟ್ಟಿ, ಖಾಯಂ ಆಹ್ವಾನಿತರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ಮಾರ್ಗದರ್ಶಕ ಉದ್ಯಮಿ ಶಶಿಧರ ಶೆಟ್ಟಿ, ಸ್ಥಾಪಕ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು. ಸ್ಥಾಪಕ ಅಧ್ಯಕ್ಷ ಜಯರಾಮ್ ಶೆಟ್ಟಿ ದಂಪತಿಗಗನ್ನು ಸನ್ಮಾನಿಸಲಾಯಿತು. ದೇರಳಕಟ್ಟೆ ಶಾಖೆಯಲ್ಲಿ ಕೆಲಸ ಮಾಡಿದ ನವೀನ್ ರೈ ಅವರನ್ನು ಗೌರವಿಸಿ ಬೀಳ್ಕೊಡುಗೆಲಾಯಿತು. ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ನೋಚ್ಚ ಕಾರ್ಯಕ್ರಮವನ್ನು ನಿರೂಪಿಸಿ
ನಿರ್ದೇಶಕ ಸೀತಾರಾಮ್ ಶೆಟ್ಟಿ ಧನ್ಯವಾದವಿತ್ತರು.