Site icon Suddi Belthangady

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಮಕ್ಕಳ ಪ್ರೀತಿಯೇ ಶಿಕ್ಷಕರ ದೊಡ್ಡ ಸಂಪಾದನೆ:ಜಾಕಿನ್ ಬಿನ್

ನಡ: ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ! ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಗೌರವಯುತವಾಗಿ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ ಮಾತನಾಡಿದ ಇವರು ” ಶಿಕ್ಷಕರಿಗೆ ಅವರ ದೊಡ್ಡ ಸಂಪಾದನೆ ಅದು ಮಕ್ಕಳ ಪ್ರೀತಿ. ಶಿಕ್ಷಕರಾಗಿ ನಾವು ನಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡೋಣ ” ಎಂದರು.

ಆಡಳಿತ ಟ್ರಸ್ಟ್ ನ ಸಂಚಾಲಕರು ಹಾಗೂ ಸರ್ವ ಸದಸ್ಯರುಗಳು ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಶುಭಾಶಯಗಳನ್ನು ಕೋರುತ್ತ ಸಂಭ್ರಮಿಸಿದರು.

Exit mobile version