ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ. 29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಚಿಸಲಾಯಿತು.
ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು. ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆ ಮಾಲೀಕರಾದ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.
ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.