Site icon Suddi Belthangady

ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿಗೆ ಚೆಸ್ ಸ್ಪರ್ಧೆಯಲ್ಲಿ ಚಾಂಪಿಯನ್

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ಶಾರದಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ಚೆಸ್ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿರುತ್ತಾರೆ.

ಚಹಾನ ಚತುರ್ಥ ಸ್ಥಾನವನ್ನು ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ಶುಭಕೋರಿದ್ದಾರೆ.

Exit mobile version