ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತಿದ್ದೇನೆಂದ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಮುಗಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೆ.6ರಂದು ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರುಪಡಿಸಲಾಯಿತು. ಆರೋಪಿ ಚಿನ್ನಯ್ಯನಿಗೆ 14ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತನನ್ನು ಶಿವಮೊಗ್ಗ ಜೈಲಿಗೆ ಕರೆದೊಯ್ಯುವ ಸಾಧ್ಯತೆಯಿದೆ.