ಬೆಳ್ತಂಗಡಿ: ಹಳೇಕೋಟೆ ವಾಣಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಧರ್ಮಸ್ಥಳ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಾಥಮಿಕ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಸಮರ್ಥ ಭಟ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿಯ ಆರಾಧ್ಯ ಜೈನ್ ತೃತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.