Site icon Suddi Belthangady

ಬೆಳ್ತಂಗಡಿ: ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಗುರು ಜಯಂತಿ-ನುಡಿ ನಮನ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 7ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಗುರುಜಯಂತಿ, ಮಾಜಿ ಅಧ್ಯಕ್ಷ ದಿ. ಎನ್. ಪದ್ಮನಾಭ ಮಾಣಿಂಜ ಅವರಿಗೆ ನುಡಿನಮನ, ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಎಂ. ಗುರು ಸಂದೇಶ ನೀಡಿದರು.
ವಿಧಾನ ಸಭಾ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜೀತಾ ವಿ. ಬಂಗೇರ ಭಾಗವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಕೃಷ್ಣಪ್ಪ ಪೂಜಾರಿ ನುಡಿ ನಮನ ಸಲ್ಲಿಸಿದರು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಾದ ಬೆಳ್ತಂಗಡಿ ಸ. ಪ್ರ. ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಸುರೇಶ್ ಪೂಜಾರಿ,ಉಜಿರೆ ಎಸ್. ಡಿ. ಎಂ. ಕಾಲೇಜು ಪ್ರಾಂಶುಪಾಲ ಪ್ರೊ. ಡಾ. ವಿಶ್ವನಾಥ್, ಮೆರಿನ್ ಇಂಜಿನಿಯರಿಂಗ್ ರಾಜ್ಯದಲ್ಲಿ ಮಟ್ಟದ 5 ನೇ ಸ್ಥಾನ ಪಡೆದ ಸಾತ್ವಿಕ್ ಎಸ್. ಪೂಜಾರಿ ಹೊಸಂಗಡಿ,, ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರಾಥನ ಹೆಚ್. ಕೆ,, 4 ನೇ ಸ್ಥಾನ ಪಡೆದ ಸುಪ್ರಿಯಾ ಎಸ್. ಮೂಡು ಕೋಡಿ, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವಕ್ಕೆ ಪಾತ್ರ ರಾದ ಅಪೇಕ್ಷಾ ಎನ್. ಎಸ್. ಉಜಿರೆ, ಚಲನಚಿತ್ರ ನಟ ದೀಕ್ಷಿತ್ ಅಂಡಿಂಜೆ, ಕಿರುತೆರೆ ನಟಿ ಅನನ್ಯ ವಿ. ಎಸ್. ಬೆಳಾಲು ಇವರನ್ನು ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕೋಶಾಧಿಕಾರಿ ಪ್ರಶಾಂತ್ ಕುಮಾರ್, ಜೊತೆ ಕಾರ್ಯದರ್ಶಿ ಸಂತೋಷ ಉಪ್ಪಾರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್,ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲು ಬ್ರಹ್ಮ ಶ್ರೀ ನಾರಾಯಣಗಳ ಗುರು ಪೂಜೆ ರಘುನಾಥ ಶಾಂತಿ ನೇತೃತ್ವದಲ್ಲಿ ನಡೆಯಿತು.
ಮಾಜಿ ಅಧ್ಯಕ್ಷ ದಿ. ಎನ್. ಪದ್ಮನಾಭಾ ಮಾಣಿ0ಜ ಇವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರುಗಳಾದ ಪೀತಾಂಬರ ಹೇರಾಜೆ, ಗಂಗಾಧರ ಮಿತ್ತಮಾರು, ಕೆ. ಎಸ್. ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ ಚಿದಾನಂದ ಪೂಜಾರಿ ಎಲ್ದಕ್ಕ, ಮಾಜಿ ನಿರ್ದೇಶಕರು, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಗ್ರಾಮ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Exit mobile version