ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ನಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು. ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ, ನಂತರ ಸರ್ವಂಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸಂಸ್ಥೆಯ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಎಸ್. ರಾಧಾಕೃಷ್ಣನ್ ಅವರ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಕಾಮತ್ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರು ಓಣಂ ಹಬ್ಬದ ಆಚರಣೆಯ ಮಾಹಿತಿಯನ್ನು ನೀಡಿದ ನಂತರ ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆ ನಡೆಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.