ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ, ಬೆಳ್ತಂಗಡಿ ವಲಯದಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ. 5ರoದು ಗುರುವಾಯನಕೆರೆ ಛಾಯಾ ಭವನದಲ್ಲಿ ಜರಗಿತು.

ಪದ್ಮಾವತಿ ಕುಶಾಲಪ್ಪ ರೈ ಪದ್ಮುoಜ ಹಾಗೂ ನoದಿನಿ ವಸಂತ್ ಶರ್ಮ ಉಜಿರೆ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಪತ್ರವನ್ನು ವಲಯದ ಮಾಜಿ ಅಧ್ಯಕ್ಷ ಸುರೇಶ್ ಬಿ. ಕೌಡoಗೆ ಹಾಗೂ ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಎಚ್. ಭಟ್ ಓದಿದರು. ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಕಾರ್ಯದರ್ಶಿ ವಿಜಯ ಎಚ್. ಭಟ್, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ನಿಯೋಜಿತ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ ಉಪಸ್ಥಿತರಿದ್ದರು.
ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆಗೈದರು. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು, ದಾಮೋದರ್ ಧನ್ಯವಾದ ನೀಡಿದರು.