ಗೇರುಕಟ್ಟೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ. 6ರಂದು ನಡೆದ ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಗೇರುಕಟ್ಟೆ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತ ಪೂವಪ್ಪ ಶೆಟ್ಟಿ ಬಿಳಿಬೈಲು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಉದ್ಘಾಟನಾ ಭಾಷಣ ಮಾಡಿದರು. ರವಿ ಇಲಂತಿಲ, ಪ್ರಮುಖರಾದ ಗೋಪಾಲಕೃಷ್ಣ ಕುಕ್ಕಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಗುರುವಾಯನಕೆರೆ ಯವರು ಬೈಠಕ್ ನೀಡಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ, ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ ಗೌಡ ನಿಡ್ಡಾಜೆ, ಕಳಿಯ ಶಕ್ತಿ ಕೇಂದ್ರ ಪ್ರಮುಖ್ ಕರುಣಾಕರ ಶೆಟ್ಟಿ, ನ್ಯಾಯತರ್ಪು ಶಕ್ತಿ ಕೇಂದ್ರ ಪ್ರಮುಖ್ ವಿಜಯ ಗೌಡ ಕಲಾಯಿದೊಟ್ಟು, ಕಳಿಯ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗು ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಕರುಣಾಕರ ಶೆಟ್ಟಿ ಸ್ವಾಗತಿಸಿ, ರಾಜೇಶ್ ಪೆರ್ಮುಡ ಬಿಜೆಪಿ ಗೀತೆ ಹಾಡಿ, ಕಾರ್ಯಕ್ರಮ ನಿರೂಪಿಸಿ, ವಿಜಯ ಗೌಡ ಕಲಾಯಿದೊಟ್ಟು ಧನ್ಯವಾದವಿತ್ತರು.