ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ಆ. 27ರಂದು ಕನ್ಯಾಡಿ ಶಾಲಾ ವಠಾರದಲ್ಲಿ ನಡೆದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿಯ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಎಕ್ಸೆಲ್ ವಿದ್ಯಾಸಂಸ್ಥೆ ಅಧ್ಯಕ್ಷ ಸುಮಂತ್ ಜೈನ್, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಪ್ರಸಾರ-ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ, ಸಂಪೂರ್ಣ ಸಹಜ ಕೃಷಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಶಿವಪ್ರಸಾದ್ ಮಲೆಬೆಟ್ಟು ಹಾಗೂ ಇನ್ನಿತರ ಪ್ರಮುಖ ಗಣ್ಯರು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.





ಸಮಿತಿ ವತಿಯಿಂದ ವಿಶೇಷವಾಗಿ ಗಣ್ಯರನ್ನು ಗೌರವಿಸಿದರು.