ನೆರಿಯ: ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ. 7ರಂದು ನಡೆದ ನೆರಿಯ ಶಕ್ತಿ ಕೇಂದ್ರ ಮಟ್ಟದ ಅಭ್ಯಾಸ ವರ್ಗ ಸಭೆ ಸೇವಾ ಸಹಕಾರಿ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಲೋಕಯ್ಯ ಗೌಡ ಇಟ್ಯಾಡಿ, ಸೋಂಪ ಗೌಡ ಬಾಂದಡ್ಕ, ಶಾಂತಪ್ಪ ಮಲೆಕುಡಿಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಸ ವರ್ಗದ ಸಂಚಾಲಕ ಕೊರಗಪ್ಪ ಗೌಡ ಚಾರ್ಮಾಡಿ ಉದ್ಘಾಟನಾ ಭಾಷಣ ಮಾಡಿದರು. ವೇದಿಕೆಯಲ್ಲಿ ಬಾಬು ಗೌಡ ಪರ್ಪಲ ಉಪಸ್ಥಿತರಿದ್ದರು.

ಮಹಾಬಲ ಗೌಡ, ರಾಜೇಶ್ ಪೆರ್ಮುಡ, ವೃಷಾಂಕ್ ಖಾಡಿಲ್ಕರ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ ಅವರು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ನೆರೆದ ಕಾರ್ಯಕರ್ತರಿಗೆ ಅರಿವು ಮೂಡಿಸಿದರು. ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುವೆಟ್ಟು, ಪಂಚಾಯತ್ ಅಧ್ಯಕ್ಷೆ ವಸಂತಿ, ಶಕ್ತಿ ಕೇಂದ್ರದ ಪ್ರಮುಖರಾದ ವಿಶ್ವನಾಥ ಗೌಡ, ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರಕಾಶ್ ನಾರಾಯಣ, ನೆರಿಯ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.