ಉಜಿರೆ: ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.
ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತ್ರಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.