ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

0

ಪಾರೆಂಕಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ. 7ರಂದು ಪಾರೆಂಕಿ, ಕುಕ್ಕಳ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತ ಪರಮೇಶ್ವರ ಗೌಡ ಹಟ್ಟತ್ತೋಡಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಪಾರೆಂಕಿ ಶಕ್ತಿಕೇಂದ್ರದ ಅಧ್ಯಕ್ಷ ಕಾಂತಪ್ಪ ಗೌಡ ಸ್ವಾಗತಿಸಿ, ಶಾಸಕ ಹರೀಶ್ ಪೂಂಜ ಅವರು ಉದ್ಘಾಟನಾ ಭಾಷಣ ಮಾಡಿದರು. ಉಮೇಶ್ ನಡ್ತಿಕಲ್ಲು, ಸದಾನಂದ ಉಂಗಿಲಬೈಲು, ಸೀತಾರಾಮ್ ಬೆಳಾಲು ಬೈಠಕ್ ತೆಗೆದುಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸಮಾರೋಪ ಭಾಷಣ ಮಾಡಿದರು. ನಂದಕುಮಾರ್ ನಿರ್ವಹಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ, ಪಕ್ಷದ ಹಿರಿಯರಾದ ಪದ್ಮನಾಭ ಅರ್ಕಜೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ಕೋಡ್ಲಕ್ಕೆ, ಕುಕ್ಕಳ ಶಕ್ತಿಕೇಂದ್ರ ಅಧ್ಯಕ್ಷ ಶೈಲೇಶ್ ಪುಲಿಮಜಲು, ಪಂಚಾಯತ್ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here