




ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಆರೋಪ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ನಿಂತಿದ್ದಾರೆ. ಸೆ.11ರಂದು ಧರ್ಮಸ್ಥಳದ ಮಂಜುನಾಥನ ಸನ್ನಿಧಾನಕ್ಕೆ ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ಪವನ್ ಕಲ್ಯಾಣ್ ನೇತೃತ್ವದಲ್ಲಿ ವಿಶೇಷ ಸೇವೆ ನಡೆಯಲಿದ್ದು, ಸಂಜೆ ದೇವಸ್ಥಾನದ ಮುಂಭಾಗ ವಿಶೇಷ ಆರತಿ ಸೇವೆ ನಡೆಯಲಿದೆ.










