ಬೆಳ್ತಂಗಡಿ: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.
ಇದೇ ವೇಳೆ ಧರ್ಮಸ್ಥಳ ಬುರುಡೆ ಪ್ರಕರಣ ಪ್ರಸ್ತಾಪಿಸಿದ ಬಿಜೆಪಿ ನಾಯಕರು, ಇಡೀ ಷಡ್ಯಂತ್ರದ ಬಗ್ಗೆ ಉನ್ನತ ಮಟ್ಟದ ಅಥವಾ ಎನ್ಐಎ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು.