ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

0

ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ನ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಪೆರಿಂಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಶೆಟ್ಟಿ, ರಮೇಶ್ ಪೂಜಾರಿ ಮಂಜಿಲ, ಲೀಲಾ ಸುರೇಶ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲು, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ, ಜಗದೀಶ್ ಕೊಯಿಲ, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಓಬಯ್ಯ ಆರಂಬೋಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ, ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here